ಕಾಂತಾರ ಸಿನೆಮಾದ ಅತ್ಯುತ್ತಮ ನಟನೆಯ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಘೋಷಣೆ

ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.…

ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು.

ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ದಶಕಗಳ ಹಿಂದೆ ನಟ ಕಮಲ್ ಹಾಸನ್ ಸಹೋದರ ಚಾರುಹಾಸನ್ ಅವರಿಗೆ ಕನ್ನಡದ ‘ತಬರನ ಕತೆ’ ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ‘ನಾನು ಅವನಲ್ಲ ಅವಳು’ ಸಿನಿಮಾದ ಅತ್ಯುತ್ತಮ ನಟನೆಗೆ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ಇನ್ಯಾವುದೇ ಕನ್ನಡದ ನಟರಿಗೆ ರಾಷ್ಟ್ರಪ್ರಶಸ್ತಿ ದೊರೆತಿರಲಿಲ್ಲ. ಇದೀಗ ಆ ಬಹು ಸಮಯದ ಬರವನ್ನು ರಿಷಬ್ ಶೆಟ್ಟಿ ನೀಗಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.