ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸರ್ಕಾರಿ ಆಸ್ಪತ್ರೆ ಮತ್ತು IMA ,PHANA ಅಡಿ ಬರೋ ಖಾಸಗಿ ಆಸ್ಪತ್ರೆಗಳು 24 ಗಂಟೆ ಕಾಲ OPD ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ.
ಇದರಿಂದ ಇಂದು ಭಾರಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಿರಲಿದೆ. ಇನ್ನು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ & ಹತ್ಯೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಆಂಧ್ರ ಪ್ರದೇಶದ ವಿಜಯವಾಡಲದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಐಎಂಎ ಸಿಬ್ಬಂದಿ & ವೈದ್ಯರು, ಸಿಬ್ಬಂದಿ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಅಲ್ದೇ, ತಮಿಳುನಾಡಿನ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾಂಡಲ್ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ನ್ಯಾಯಕ್ಕಾಗಿ ಎಲ್ಲೆಲ್ಲೂ ಹೋರಾಟ ಭುಗಿಲೆದ್ದಿದೆ.