CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ಗೆ ಅನುಮತಿ

CM Siddaramaiah: ರಾಜ್ಯದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದೆ. ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ…

CM Siddaramaiah and Governor Thawar Chand Gehlot

CM Siddaramaiah: ರಾಜ್ಯದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದೆ. ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಅತಿದೊಡ್ಡ ಸಂಕಷ್ಟ ಇದು ಎಂದು ಹೇಳಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಮತ್ತು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಇದೇ ವಿಚಾರದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು.

CM Siddaramaiah and Governor Thawar Chand Gehlot
CM Siddaramaiah and Governor Thawar Chand Gehlot

CM Siddaramaiah: ಇಬ್ಬರು ದೂರುದಾರರಿಗೂ ರಾಜಭವನದಿಂದ ಕರೆ

ಮುಡಾ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರು ದೂರುದಾರರಾದ ಟಿಜೆ ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅವರಿಗೆ ರಾಜಭವನದಿಂದ ಕರೆ ಹೋಗಿದೆ. ಇಬ್ಬರಿಗೂ ರಾಜಭವನಕ್ಕೆ ಬರಲು ಗವರ್ನರ್‌ ಸೂಚನೆ ನೀಡಿದ್ದಾರೆ. ಹೀಗಾಗಿ ಮಧ್ಯಾಹ್ನ ರಾಜ್ಯಪಾಲ ಗೆಹ್ಲೋಟ್‌ ಅವರನ್ನು ಇವರಿಬ್ಬರೂ ಭೇಟಿ ಮಾಡಲಿದ್ದು, ಮುಂದಿನ ಬೆಳವಣಿಗೆ ತೀವ್ರ ಕುತೂಹಲ ಕೆರಳಿಸಿದೆ.

Vijayaprabha Mobile App free

CM Siddaramaiah: ಸಿಎಂ ವಿರುದ್ಧ ತನಿಖೆಗೆ ಅನುಮತಿ.. ದಿನೇಶ್‌ ಗುಂಡೂರಾವ್‌ ಹೇಳಿದ್ದೇನು?

dinesh gundu rao vijayaprabha
dinesh gundu rao vijayaprabha

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಸಚಿವ ದಿನೇಶ್‌ ಗುಂಡೂರಾವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು, ಕಾಂಗ್ರೆಸ್‌ ಸರ್ಕಾರ ಅಸ್ಥಿರಗೊಳಿಸಲು ಮೋದಿ, ಅಮಿತ್‌ ಶಾ ಷಡ್ಯಂತ್ರ ನಡೆಸುತ್ತಿದ್ದಾರೆ. ರಾಜ್ಯಪಾಲರು ಅವರ ಕೈಗೊಂಬೆ ಎಂದು ಅವರು ಕಿಡಿ ಕಾರಿದ್ದಾರೆ. ಇದು ಬಿಜೆಪಿಯವರಿಗೆಯೇ ತಿರುಗುಬಾಣವಾಗುತ್ತದೆ ನೋಡುತ್ತಿರಿ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.