(RATION CARD) ರೇಷನ್ ಕಾರ್ಡ್ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆ ಪಡೆಯಲು ಮುಖ್ಯವಾಗಿದ್ದು, ಅಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಬಹುಮುಖ್ಯವಾಗಿದೆ. ಈ ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಿಸಲು ಈ ಹಿಂದೆಯೇ ಸೂಚಿಸಲಾಗಿತ್ತು. ಇದೀಗ ಇ-ಕೆವೈಸಿ ಮಾಡಿಸಲು ಈ ತಿಂಗಳು ಕೊನೆಯ ದಿನವಾಗಿದ್ದು, ಮಾಡಿಸದೇ ಇರುವವರಿಗೆ ರೇಷನ್ ಸ್ಥಗಿತಗೊಳಿಸಲಾಗುತ್ತದೆ ಎನ್ನಲಾಗಿದೆ. ಹೀಗಾಗಿ ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಿಸದೇ ಇರುವವರು ಕಡ್ಡಾಯವಾಗಿ ಮಾಡಿಸಿಕೊಳ್ಳಿ. ಹಾಗಾದರೆ ಎಲ್ಲಿ ಇ-ಕೆವೈಸಿ ಮಾಡಿಸುವುದು, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಎಲ್ಲಿ ಇ-ಕೆವೈಸಿ ಮಾಡಿಸಬೇಕು?:
ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಮಾಡಿಸಬಹುದಾಗಿದೆ.
ಬೇಕಾಗುವ ದಾಖಲೆಗಳು ಯಾವುದು?:
- ಪಡಿತರ ಚೀಟಿಯ ಒರಿಜಿನಲ್ ಪ್ರತಿ
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
- ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
- ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ
- ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಕೊನೆಯ ದಿನಾಂಕದೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಿ.