ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಸಂಚಾರಿ ಠಾಣೆಗಳಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಮಾಹಿತಿ ನೀಡಿದ್ದು, ಕೆಲವು ಅಹಿತಕರ ಘಟನೆಗಳು ನಡೆದಿವೆ. ನೊಂದವರಿಗೆ ನೆರವು ನೀಡಬೇಕು. ಕಾನೂನು ಪಾಲನೆ ದೃಷ್ಟಿಯಿಂದ ಮಹಿಳಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ದೌರ್ಜನ್ಯಕ್ಕೆ ಕಡಿವಾಣ ಹಾಕಲು ಡ್ರಂಕ್ & ಡ್ರೈವ್ ಚೆಕ್ ಮಾಡಲಾಗುತ್ತದೆ. ಮಹಿಳೆಯರ ಸುರಕ್ಷತೆಗಾಗಿ ರಾತ್ರಿ ಕರ್ತವ್ಯಕ್ಕೆ ಪ್ರತಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿಯೂ ಇಬ್ಬರು ಮಹಿಳಾ ಹೆಚ್ ಸಿ ಹಾಗೂ ಪಿಸಿ ನಿಯೋಜನೆ ಮಾಡಲಾಗಿದೆ. ರಾತ್ರಿ ಡ್ಯೂಟಿಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಎರಡು ರೀತಿ ಡ್ಯೂಟಿ ಇರುತ್ತದೆ. ಒಬ್ಬರು ಠಾಣೆಯ ಒಳಗಡೆ ಕರ್ತವ್ಯ ನಿರ್ವಹಿಸುತ್ತಾರೆ ಇನ್ನೊಬ್ಬರು ಠಾಣೆಯ ಹೊರಗೆ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.