ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಾರು ಚಾಲಕನೋರ್ವ ಪಾಸ್ ದುರುಪಯೋಗಪಡಿಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದಾನೆ.
ಈ ಹಿಂದೆ ವಿಧಾನಪರಿಷತ್ ಶಾಸಕರಾಗಿದ್ದ ಅವಧಿಯಲ್ಲಿನ ಸ್ಟಿಕರ್ ಬಳಸಿರುವ ಚಾಲಕ. ‘ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ’ ಎಂಬ ಪಾಸ್ ಅಳವಡಿಕೊಂಡು ಹಲವು ದಿನಗಳಿಂದ ಸ್ಕೋಡಾ ಕಾರಿನ ಮುಂಭಾಗದಲ್ಲಿ ಸ್ಟಿಕರ್ ಅಂಟಿಸಿ ತಿರುಗಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದವರಿಂದ ದುರುಪಯೋಗ ಆಗಿರುವ ಶಂಕೆಯಿದೆ. ಈ ಹಿನ್ನೆಲೆ ವಿಧಾನಸೌಧ ಪೊಲೀಸರಿಗೆ ಫೋನ್ ಮೂಲಕ ಸಂಸದರ ಆಪ್ತ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ. ಸದ್ಯ ಕಾರು ಪತ್ತೆಯಾಗಿದ್ದು, ದೂರು ದಾಖಲಾಗ್ತಿದ್ದಂತೆ ಕಾರು ಚಾಲಕ ನಾಪತ್ತೆಯಾಗಿದ್ದಾನೆ. ಚಾಲಕನಿಗಾಗಿ ವಿಧಾನಸೌಧ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.