ಬೆಂಗಳೂರು: ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್ (86) ನಿಧನರಾಗಿದ್ದಾರೆ.
ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ 5ರಂದು ಜನಿಸಿದರು. ಸಾಗರ, ಶಿವಮೊಗ್ಗದಲ್ಲಿ ಶಿಕ್ಷಣ ಪಡೆದಿದ್ದರು. ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು.
ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.