ಗೃಹಿಣಿಯರಿಗೆ ರೀಲ್ಸ್ ಚಾಲೆಂಜ್‌ : ಬಹುಮಾನದ ಆಫರ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್​!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ.

Vijayaprabha Mobile App free

ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್​ಗಳು ಹೆಚ್ಚಿನ ವೀಕ್ಷಣೆಗಳನ್ನು (ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್​ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ಅವರು ಉಲ್ಲೇಖಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.