ನಕಲಿ ದಾಖಲೆ ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್!

(Bpl Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅದರಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗೆ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯಕ್ಕೆ ಸಂಬಂಧಪಟ್ಟಂತೆ ಹಾಗೂ ಇನ್ನಿತರ ಯಾವುದೇ ಸೌಲಭ್ಯ…

(Bpl Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅದರಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗೆ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯಕ್ಕೆ ಸಂಬಂಧಪಟ್ಟಂತೆ ಹಾಗೂ ಇನ್ನಿತರ ಯಾವುದೇ ಸೌಲಭ್ಯ ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ ಮುಖ್ಯವಾಗಿದೆ.

ಆದರೆ, ರಾಜ್ಯದಲ್ಲಿ ನಕಲಿ ದಾಖಲೆಯನ್ನು ನೀಡಿ ಹಲವು ಜನ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದಿದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ನಕಲಿ ದಾಖಲೆ ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದವರ ರೇಷನ್ ಕಾರ್ಡ್ ಅನ್ನು ಡಿಲೀಟ್ ಮಾಡಲು ಮುಂದಾಗಿದೆ.

ಹೌದು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ (Bpl Card) ಕಡಿವಾಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ ಕಡಿವಾಣಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದವರಿಗೆ ಸಂಕಷ್ಟ ಎದುರಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಿಸಬೇಕಾಗುತ್ತದೆ.

Vijayaprabha Mobile App free

ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊರಂದಿರುವವರು, 4,036 ಮಂದಿ ಸರ್ಕಾರಿ ನೌಕರರಿರುವುದು ಪತ್ತೆಯಾಗಿದೆ. ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯುವಂತಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.