Heavy rain: ರಾಜ್ಯಾದ್ಯಂತ ನೈರುತ್ಯ ಮುಂಗಾರು (Southwest Monsoon) ಮತ್ತೆ ಸಕ್ರಿಯಗೊಂಡಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ (Heavy rain) ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ .
ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10 ರವರೆಗೂ ಭಾರೀ ಮಳೆ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಸುಮಾರು 64.5 ರಿಂದ 115.5 ಮಿಮೀ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೆ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
https://vijayaprabha.com/todays-dina-bhavishya-and-daily-panchanga-sep-08/