Heavy rain: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ (Heavy rain) ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹೌದು, ಕರಾವಳಿ ಜಿಲ್ಲೆ ಮತ್ತುಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದ.ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ: ಇವತ್ತು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಅತ್ಯುತ್ತಮ ಫಲಿತಾಂಶ, ಯಾವ ರಾಶಿಗೆ?
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಇಂದು ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 kmph) ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು, ಬೀದರ್, ಕಲಬುರಗಿ, ಯಾದಗಿರಿ & ರಾಯಚೂರು ಜಿಲ್ಲೆಗಳಲ್ಲಿ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
Panchanga | ಇಂದು ಚಂದ್ರನು ವೃಶ್ಚಿಕ ರಾಶಿಯಿಂದ ಧನು ರಾಶಿಗೆ ಪಯಣ; ಅಮೃತ ಕಾಲ, ರಾಹುಕಾಲದ ಮಾಹಿತಿ!
.