“ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

ಬೆಂಗಳೂರು:-ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕನ್ನಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಗಳಿಸಿದ್ದ ಕಿರಣ್ ರಾಜ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ…

ಬೆಂಗಳೂರು:-ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕನ್ನಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಗಳಿಸಿದ್ದ ಕಿರಣ್ ರಾಜ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ.

ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗಬೇಕಿತ್ತು. ಅದಕ್ಕೂ ಮೊದಲು ಈ ರೀತಿ ಆಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.