ಡಿಕಾಕ್ ಅರ್ಧ ಶತಕ: ಸನ್ ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು

ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡೈಯಾನ್ಸ್ 34 ರನ್ ಗಳ ರೋಚಕ ಗೆಲವು ದಾಖಲಿಸಿದೆ. 209 ರನ್…

mi vs srh vijayaprabha

ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡೈಯಾನ್ಸ್ 34 ರನ್ ಗಳ ರೋಚಕ ಗೆಲವು ದಾಖಲಿಸಿದೆ.

209 ರನ್ ಗಳ ಗುರಿಯನ್ನು ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 174 ರನ್ ಗಳಸಿ 34 ರನ್ ಗಳಿಂದ ಸೋಲಿಗೆ ಶರಣಾಯಿತು. ಸನ್ ರೈಸರ್ಸ್ ಪರ, ನಾಯಕ ಡೇವಿಡ್ ವಾರ್ನರ್-60, ಜಾನಿ ಬೆರ್ಸ್ಟೋ-25, ಮನೀಶ್ ಪಾಂಡ್ಯೇ-30, ಅಬ್ದುಲ್ ಸಮದ್-20 ರನ್ ಗಳಿಸಿದರು. ಮುಂಬೈ ಇಂಡಿಯನ್ಸ್ ಪರ, ಟ್ರೆಂಟ್ ಬೋಲ್ಟ್, ಜೇಮ್ಸ್ ಪ್ಯಾಟಿನ್ಸನ್, ಬುಮ್ರಾ ತಲಾ 2 ವಿಕೆಟ್ ಕೃಣಾಲ್ ಪಾಂಡ್ಯ 1 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು.

ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್-67, ಸೂರ್ಯ ಕುಮಾರ್ ಯಾದವ್-27, ಇಶಾನ್ ಕಿಶನ್-31, ಹಾರ್ದಿಕ್ ಪಾಂಡ್ಯ-28, ಪೊಲಾರ್ಡ್-25 ಮತ್ತು ಕೃಣಾಲ್ ಪಾಂಡ್ಯ-20 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 208 ರನ್ ಗಳಿಸಿತು. ಸನ್ ರೈಸರ್ಸ್ ಪರ ಸಂದೀಪ್ ಶರ್ಮ, ಸಿದ್ದಾರ್ಥ್ ಕೌಲ್ ತಲಾ 2 ವಿಕೆಟ್, ರಶೀದ್ ಖಾನ್ 1 ವಿಕೆಟ್ ಪಡೆದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.