ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72) ಇಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಏಮ್ಸ್ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೃತಕ ಉಸಿರಾಟದ ಬೆಂಬಲದಲ್ಲಿದ್ದರು. ವೈದ್ಯರ ಬಹುಶಿಸ್ತೀಯ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.