ರೈತ ಸಮುದಾಯಕ್ಕೆ ಸಿಹಿಸುದ್ದಿ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಧಿ…

ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. 

ಡಿ.ದೇವರಾಜ ಅರಸುರವರ ಹಿಂದುಳಿದ ವರ್ಗಗಳ ಅಭಿವೃದ್ಧಿಯ ನಿಗಮ ಹಾಗೂ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣದಾದ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಅರ್ಹತೆಯನ್ನು ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯಸ್ಸು 18 ರಿಂದ 60 ವರ್ಷದೊಳಗಿರಬೇಕು. ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆಗೆ ಜಮೀನನ್ನು ನೀವು ನಿಮ್ಮ ಬಳಿ ಇರಲೇ ಬೇಕು.

Vijayaprabha Mobile App free

ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕವಾಗಿ ರಾಜ್ಯದ ರೈತರಿಗೆ ಬೋರ್ವೆಲ್ ಅನ್ನು ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.