One nation one election: ‘ಒಂದು ರಾಷ್ಟ್ರ-ಒಂದು ಚುನಾವಣೆ’ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ (Union Cabinet) ಬುಧವಾರ ಅನುಮೋದನೆ ನೀಡಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆಯಾಗಿದೆ. ಇದು ಸಾರ್ವಜನಿಕ ಹಣವನ್ನು ಉಳಿಸುತ್ತದೆ & ಸರ್ಕಾರಗಳು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.
ಇದನ್ನೂ ಓದಿ: ಮುನಿರತ್ನ ಜಾಮೀನು ಕಾಯ್ದಿರಿಸಿದ ಕೋರ್ಟ್; ಮುನಿರತ್ನಗೆ ಮತ್ತೆ ಜೈಲೇ ಗತಿ!
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಅವರ ನೇತೃತ್ವದ ಉನ್ನತ ಸಮಿತಿಯು ಒಂದೇ ಸಮಯದಲ್ಲಿ ಚುನಾವಣೆ ನಡೆಸಲು ಮಾರ್ಚ್‌ನಲ್ಲಿ ಶಿಫಾರಸು ಮಾಡಿತ್ತು.