Maize price : ರೈತರಿಗೆ ಸಿಹಿ ಸುದ್ದಿ…ಮೆಕ್ಕೆಜೋಳಕ್ಕೆ ಬಂಪರ್ ಬೆಲೆ

Maize price : ಮೆಕ್ಕೆಜೋಳಕ್ಕೆ ಬಂಪರ್ ಬೆಲೆ ಬಂದಿದ್ದು, ರೈತರಲ್ಲಿ ಸಂತಸ ತಂದಿದೆ. ಕೆಲವು ಉದ್ಯಮಗಳಿಗೆ ಮಾತ್ರ ಸೀಮಿತವಾಗಿದ್ದ ಮೆಕ್ಕೆಜೋಳದಿಂದ ಈಗ ಎಥೆನಾಲ್ ಉತ್ಪಾದನೆ ಮಾಡಲಾಗುತ್ತಿದ್ದು, ಇದರ ಪರಿಣಾಮ ಮೆಕ್ಕೆಜೋಳಕ್ಕೆ ಭಾರಿ ಬೇಡಿಕೆ ಬಂದಿದೆ.…

Maize price

Maize price : ಮೆಕ್ಕೆಜೋಳಕ್ಕೆ ಬಂಪರ್ ಬೆಲೆ ಬಂದಿದ್ದು, ರೈತರಲ್ಲಿ ಸಂತಸ ತಂದಿದೆ. ಕೆಲವು ಉದ್ಯಮಗಳಿಗೆ ಮಾತ್ರ ಸೀಮಿತವಾಗಿದ್ದ ಮೆಕ್ಕೆಜೋಳದಿಂದ ಈಗ ಎಥೆನಾಲ್ ಉತ್ಪಾದನೆ ಮಾಡಲಾಗುತ್ತಿದ್ದು, ಇದರ ಪರಿಣಾಮ ಮೆಕ್ಕೆಜೋಳಕ್ಕೆ ಭಾರಿ ಬೇಡಿಕೆ ಬಂದಿದೆ.

ಹೌದು, ಕೊಪ್ಪಳದ ಮಾರುಕಟ್ಟೆಯಲ್ಲಿ ಒಂದು ಕ್ವಿಂಟಲ್ ಮೆಕ್ಕೆಜೋಳ 2950 ರೂ.ವರೆಗೂ ಮಾರಾಟವಾಗಿದ್ದು, ಈ ಹಿಂದಿನ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿದೆ. ಪ್ರಸ್ತುತ ಕೇಂದ್ರ 2330 ರೂ. ಬೆಂಬಲ ಬೆಲೆ ಘೋಷಿಸಿದ್ದು, ಇದಕ್ಕಿಂತಲೂ ಮಾರುಕಟ್ಟೆಯಲ್ಲಿ ದರ ಹೆಚ್ಚಳವಾಗಿದೆ.

Maize price : ಮೆಕ್ಕೆಜೋಳ 2700 ರಿಂದ 2950 ರೂ.ಗೆ ಮಾರಾಟ ಸಾಧ್ಯತೆ

ಇನ್ನು, ಮೆಕ್ಕೆಜೋಳ ದರ ಯಾವಾಗಲು 2 ಸಾವಿರ ರೂ. ಆಸುಪಾಸಿನಲ್ಲಿರುತ್ತಿತ್ತು. ಆದರೆ, ರಾಜ್ಯದ 10 ಸಕ್ಕರೆ ಕಾರ್ಖಾನೆಗಳಿಗೆ ಎಥೆನಾಲ್ ಉತ್ಪಾದನೆಗೆ ಅನುಮತಿ ನೀಡಿದ್ದು, ಪ್ರತಿದಿನ 70 ಸಾವಿರ ಕ್ವಿಂಟಲ್ ಮೆಕ್ಕೆಜೋಳ ಬೇಕಾಗಬಹುದು. ಬೇರೆ ಉದ್ಯಮಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಬೆಲೆ ನಿಯಂತ್ರಣ ಮಾಡಲಾಗಿದೆ.

Vijayaprabha Mobile App free

2700 ರಿಂದ 2950 ರೂ.ಗೆ ಮೆಕ್ಕೆಜೋಳ ಬೆಲೆ ಬರುವ ಸಾಧ್ಯತೆ ಇದ್ದು, ಕೋಳಿ ಸಾಕಾಣಿಕೆಗೆ ಮೆಕ್ಕೆಜೋಳವೇ ಪ್ರಮುಖ ಆಹಾರವಾಗಿದ್ದು, ದರ ಏರಿಕೆಯಿಂದ ಮೊಟ್ಟೆ, ಕೋಳಿ ದರ ಏರಿಕೆಯಾಗಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.