(Anganwadi recruitment:) ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
* ಅಂಗನವಾಡಿ ಕಾರ್ಯಕರ್ತೆ
* ಮಿನಿ ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿ
ಹುದ್ದೆಯ ಸಂಖ್ಯೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ: 54
* ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ: 14
* ಅಂಗನವಾಡಿ ಸಹಾಯಕಿ ಹುದ್ದೆ ಸಂಖ್ಯೆ: 217
ವಿದ್ಯಾರ್ಹತೆ:
* ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ತೇರ್ಗಡೆ
* ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ
ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು.
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
* ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ / ಪಿಯುಸಿ ಅಂಕಪಟ್ಟಿ
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
* ವಾಸಸ್ಥಳ ದೃಢೀಕರಣ ಪತ್ರ
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ
ಅರ್ಜಿ ಸಲ್ಲಿಕೆ ಹೇಗೆ?;
* ವೆಬ್ ವಿಳಾಸ karnemakaone.kar.nic.in/abcd/ApplicationForm_JA_org.aspx ಕ್ಕೆ ಭೇಟಿ ನೀಡಿ.
* ಹುದ್ದೆ ಬಯಸುವ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ (ತಾಲ್ಲೂಕು), ಅಧಿಸೂಚನೆ ಸಂಖ್ಯೆ, ಹುದ್ದೆ ಆಯ್ಕೆ ಮಾಡಿ.
* ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ.
* ಆನ್ ಲೈನ್ ಅರ್ಜಿ ನಮೂನೆ ವೆಬ್ ಪೇಜ್ ತೆರೆಯುತ್ತದೆ.
* ಕೇಳಲಾದ ಸಂಪೂರ್ಣ ವಿವರ ನೀಡಿ ಅಪ್ಲಿಕೇಶನ್ ಸಲ್ಲಿಸಿ.
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್ ಲೋಡ್ ಮಾಡಿರಿ.
ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
14-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
19-10-2024