ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು!

ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ…

ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಇದ್ದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾರೆ. ನಿನ್ನೆ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾವನ್ನಪ್ಪಿದ್ದ ಎಂದು ವೈದ್ಯರು ಪೋಷಕರು ತಿಳಿಸಿದ್ದಾರೆ.

ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು, ಸಾರ್ವಜನಿಕ ವಲಯದಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.