ವಿದ್ಯಾರ್ಥಿಗಳಿಗೆ SBI ಯಿಂದ ಸಿಗಲಿದೆ 15,000; ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

(SBI Scholarship) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಫೌಂಡೇಶನ್ ವಿದ್ಯಾರ್ಥಿಗಳಿಗೆ ಆಶಾ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 6 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈ…

(SBI Scholarship) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಫೌಂಡೇಶನ್ ವಿದ್ಯಾರ್ಥಿಗಳಿಗೆ ಆಶಾ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

6 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈ ಆಶಾ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹರಾಗಿದ್ದು, ಈ ಯೋಜನೆಯ ಭಾಗವಾಗಿ ಕಡಿಮೆ ಆದಾಯ ಮತ್ತು ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ರೂ.15 ಸಾವಿರದಿಂದ ರೂ.2 ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಈ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 01 ಆಗಿದೆ.

Vijayaprabha Mobile App free

ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳನ್ನು ಈ ವೆಬ್ ಸೈಟ್ ಗೆ ಭೇಟಿ ನೀಡಿ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸು ಅರ್ಹತೆ ಏನಿರಬೇಕು?;
ಪ್ರಸ್ತುತ 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 75 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3 ಲಕ್ಷ ಮೀರಬಾರದು.

ಇದರಲ್ಲಿ ಶೇ 50ರಷ್ಟು ಸ್ಲಾಟ್ ಗಳನ್ನು ಬಾಲಕಿಯರಿಗೆ ಮೀಸಲಿಡಲಾಗಿದೆ. ಸ್ವೀಕರಿಸಿದ ಅರ್ಜಿಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ 15 ಸಾವಿರ ಶಿಷ್ಯವೇತನ ನೀಡಲಾಗುವುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.