‌ಮುಡಾ ಹಗರಣ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಪ್ರಾಸಿಕ್ಯೂಷನ್ ಪ್ರಶ್ನಿಸಿ…

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.