Muda Scam: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳನ್ನು ಒಳಗೊಂಡಿದೆ. ಈ ಹಗರಣದಲ್ಲಿ, ಮುಡಾ ಬದಲಿ ನಿವೇಶನಗಳನ್ನು ಅಕ್ರಮ ಹಂಚಿಕೆ ಮಾಡಲಾಗಿದೆ ಎಂಬ ಆರೋಪವಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ಇಂದು ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.
ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Muda Scam : ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ: ಸಿಎಂಗೆ ಮೈನಸ್ ಆದ ಅಂಶಗಳು ಇಲ್ಲಿವೆ
ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೆಲವು ವಿಚಾರಗಳು ಸಿಎಂಗೆ ಮೈನಸ್ ಆಗಿದೆ. ಅದರಲ್ಲಿ ಮುಖ್ಯವಾದುದು ರಾಜ್ಯಪಾಲರು ಆದೇಶ ಮಾಡುವಾಗ ನನಗೆ ಸಂಶಯ ಇದೆ ಎಂದು ಬರೆದಿದ್ದಾರೆ.
ಇನ್ನು ಒಬ್ಬ ಸಾಮಾನ್ಯ ಮನುಷ್ಯನಾದರೆ ನೋಟಿಫಿಕೇಷನ್ ಆದ ಜಮೀನು ಡಿನೋಟಿಫಿಕೇಷನ್ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಪತ್ನಿ ನೊಂದಾಣಿ ಕಚೇರಿಗೂ ಹೋಗದೇ ಗೆಸ್ಟ್ ಹೌಸ್‌ಲ್ಲಿ ಗಿಫ್ಟ್ ಡೀಡ್ ರಿಜಿಸ್ಟರ್ ಆಗಿದೆ. ಈ ಎಲ್ಲಾ ವಿಚಾರಗಳು ಸಿಎಂಗೆ ಮೈನಸ್ ಆಗಿದೆ.
ಇದನ್ನೂ ಓದಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ PDO ಹುದ್ದೆಗಳಿಗೆ ಅರ್ಜಿ ಅಹ್ವಾನ
ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್: ರಾಜ್ಯಾದ್ಯಂತ ಅಲರ್ಟ್
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಪ್ರಶ್ನಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಹಾಗಾಗಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಹಿರಿಯ ಪೊಲೀಸರು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಎಲ್ಲಾ ಕಮಿಷನರೆಟ್ ಹಾಗೂ ಎಲ್ಲಾ ಜಿಲ್ಲೆಯ ಎಸ್‌ಪಿಗಳು, ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಟ್ ಹೆಚ್ಚಿಸುವಂತೆ ಹೇಳಲಾಗಿದೆ. ಇಂದು ಪ್ರತಿಭಟನೆ, ಗಲಭೆ ,ಧರಣಿ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಬಿಗಿ ಭದ್ರತೆ ವಹಿಸುವಂತೆ ತಿಳಿಸಲಾಗಿದೆ.
Muda Scam : CM ಸಿದ್ದರಾಮಯ್ಯಗೆ ಮತ್ತೊಂದು ದೊಡ್ಡ ಸಂಕಷ್ಟ?
ಮುಡಾ ಹಗರಣದಲ್ಲಿ ಸಿಎಂ ಅವರ ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡ ಬೆನ್ನಲ್ಲೇ, ಇದೀಗ ಸಿಎಂಗೆ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ದೂರುದಾರರಾದ ಟಿ.ಜೆ. ಅಬ್ರಾಹಂ & ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್’ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಲಿದ್ದಾರೆ. ನಾಳೆ/ನಾಡಿದ್ದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಒಂದು ವೇಳೆ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಅನುಮತಿ ನೀಡಿದ್ರೆ ಸಿಎಂ ವಿರುದ್ಧ FIR ದಾಖಲಾಗಲಿದೆ.
ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಕೇಸ್: ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ
ಮುಡಾ ತೀರ್ಪು : ಮೇಲ್ಮನವಿ ಸಲ್ಲಿಸಲು ಸಿಎಂ ತೀರ್ಮಾನ
ಮುಡಾ ಹಗರಣದಲ್ಲಿ ಸಿಲುಕಿರೋ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಾಪಾಲರ ಆದೇಶವನ್ನು ಹೈ ಕೋರ್ಟ್ ಎತ್ತಿಹಿಡಿದಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಕಾನೂನು ತನಿಖೆ ಎದುರಿಸಬೇಕಿದ್ದು ಅವರಿಗೆ ಸಂಕಷ್ಟ ಎದುರಾಗಿದೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠದಲ್ಲಿ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.