CM Siddaramaiah resignation trending : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೌದು, ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ತೀರ್ಪನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಪೀಠ ಇಂದು ಪ್ರಕಟಿಸಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಿಎಂ ರಾಜೀನಾಮೆ ವಿಚಾರ ಟ್ರೆಂಡಿಂಗ್‌ನಲ್ಲಿದೆ.
ಇದನ್ನೂ ಓದಿ: ಏನಿದು ಮೂಡ ನಿವೇಶನ ಹಂಚಿಕೆ ಹಗರಣ? ಸಿಎಂಗೆ ಮೈನಸ್ ಆದ ಅಂಶಗಳಿವು!
ಕಾಂಗ್ರೆಸ್‌ನಲ್ಲಿ ಕುರ್ಚಿ ಕಾಳಗ: ಸಿಎಂ ರೇಸ್‌ನಲ್ಲಿ ಇದೆ ಇವರ ಹೆಸರು
ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ರಾಜೀನಾಮೆ ಕೂಗು ಕೇಳಿ ಬರುತ್ತಿದ್ದು, ಈ ಬೆನ್ನಲ್ಲೇ ಕೈ ಪಾಳಯದಲ್ಲಿ ಕುರ್ಚಿ ಕಾಳಗ ಕೂಡ ಆರಂಭವಾಗಿದೆ ಎನ್ನಲಾಗಿದೆ.
ಹೌದು, ಡಿ.ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಜಿ. ಪರಮೇಶ್ವರ್, ಶಾಮನೂರು ಶಿವಶಂಕರಪ್ಪ ಹಾಗೂ ಆರ್.ವಿ ದೇಶಪಾಂಡೆ ಸಿಎಂ ರೇಸ್‌ನಲ್ಲಿದ್ದು, ಈಗಾಗಲೇ ಹಲವಾರು ನಾಯಕರು ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದ್ಯ ಈ ನಾಯಕರು ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್