ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ಪತ್ತೆ!

ಹೈದರಾಬಾದ್: ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ…

ಹೈದರಾಬಾದ್: ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದೆ.ಗೊಲ್ಲಗುಡೆಂ ಪಂಚಾಯತ್‌ನ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ ತೆರಳಿದ್ದರು. ಪ್ರಸಾದ ರೂಪದಲ್ಲಿ ತಂದಿದ್ದ ಲಡ್ಡುವಿನಲ್ಲಿ ಸಣ್ಣ ಪೇಪರ್‌ನಲ್ಲಿ ಕಟ್ಟಿದ್ದ ಗುಟ್ಕಾ ಪತ್ತೆಯಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.