ಬೆಂಗಳೂರು: ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಆದರೆ ನಾವು ಸಿಎಂ ಪರ ಇದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ನೀಡಿದ ನಂತರ ಮಾತನಾಡಿದ ಅವರು, ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆದಿದೆ. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ. ಏನು ಹಿನ್ನಡೆಯಾಗಿದೆ? ಆದೇಶ ಏನಿದೆ ನೋಡುತ್ತೇನೆ ಎಂದು ತಿಳಿಸಿದರು.
ನನ್ನ ವಿರುದ್ಧವೂ ಹೀಗೆಯೇ ಷಡ್ಯಂತ್ರ ನಡೆದಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ್ದರು. ಈಗ ಆ ಪ್ರಕರಣ ಏನಾಗಿದೆ? ಹಾಗೆಯೇ ಸಿಎಂ ವಿರುದ್ಧವೂ ಷಡ್ಯಂತ್ರ ನಡೆದಿದೆ. ಏನೇ ಆಗಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.