ತಿರುಪತಿ: ತಿರುಪತಿ ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಆಗಮಿಸಿದೆ.
ಎರಡು ಟ್ರಕ್‌ಗಳಲ್ಲಿ ತಿರುಪತಿಗೆ ಕೆಎಂಎಫ್ ತುಪ್ಪ ಬಂದಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಚನ್ನರಾಯಪಟ್ಟಣದಿಂದ ಮತ್ತೊಂದು ಟ್ರಕ್‌ನಲ್ಲಿ ತುಪ್ಪ ಸರಬರಾಜಾಗಿದೆ.
ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ ಆಗಮಿಸಿರುವ ಟ್ರಕ್‌ಗಳು ತಿರುಮಲಕ್ಕೆ ತಲುಪಲಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.