ಮಹಾಲಕ್ಷ್ಮಿ ಕೊಲೆ ಪ್ರಕರಣ: ಹಂತಕನ ಡೆತ್‌ನೋಟ್‌ನಲ್ಲಿ ಹತ್ಯೆಯ ರಹಸ್ಯ ಬಯಲು

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದು, ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರಿಗೆ ದೊರಕಿದೆ. ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ…

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದು, ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರಿಗೆ ದೊರಕಿದೆ.

ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವನ್ನು ಡೆಟ್‌ನೋಟ್‌ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿ ಡೆತ್‌ನೋಟ್ ಇರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸೆಪ್ಟಂಬರ್ 3 ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಆರೋಪಿ ಮುಕ್ತಿ ರಂಜನ್ ರಾಯ್ ಉಲ್ಲೇಖಿಸಿದ್ದಾನೆ. ಸೆ.3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದೇನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು. ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್‌ನೋಟ್‌ ಬರೆದುಕೊಂಡಿದ್ದಾನೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.