ಮುಂಬೈ : ಭಯೋತ್ಪಾದನಾ ಬೆದರಿಕೆ -ಪೊಲೀಸರು ಹೈಅಲರ್ಟ್‌

ಮುಂಬೈ:ಭಯೋತ್ಪಾದನಾ ಬೆದರಿಕೆಯ ಕುರಿತು ಕೇಂದ್ರ ಏಜೆನ್ಸಿಗಳು ಎಚ್ಚರಿಕೆ ನೀಡಿದ ನಂತರ ಮುಂಬೈ ಪೊಲೀಸರು ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ…

ಮುಂಬೈ:ಭಯೋತ್ಪಾದನಾ ಬೆದರಿಕೆಯ ಕುರಿತು ಕೇಂದ್ರ ಏಜೆನ್ಸಿಗಳು ಎಚ್ಚರಿಕೆ ನೀಡಿದ ನಂತರ ಮುಂಬೈ ಪೊಲೀಸರು ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಪೊಲೀಸ್ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಗರದ ಡಿಸಿಪಿಗಳು (ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್) ತಮ್ಮ ತಮ್ಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ತಿಳಿಸಲಾಗಿದೆ.

Vijayaprabha Mobile App free

ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ನಗರದ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ಜನನಿಬಿಡ ಕ್ರಾಫರ್ಡ್ ಮಾರುಕಟ್ಟೆ ಪ್ರದೇಶದಲ್ಲಿ ಶುಕ್ರವಾರ ಪೊಲೀಸರು ಅಣಕು ಡ್ರಿಲ್ ನಡೆಸಿದರು. ಆದರೆ, ಇದು ಹಬ್ಬ ಹರಿದಿನಗಳ ಮುನ್ನಾ ಭದ್ರತಾ ಕಸರತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.