Ratan Tata admitted to hospital : ಕೈಗಾರಿಕೋದ್ಯಮಿ, ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata) (86) ಅವರನ್ನು ಸೋಮವಾರ ಮುಂಜಾನೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೌದು, ಚಿಂತಾಜನಕ ಸ್ಥಿತಿಯಲ್ಲಿದ್ದ ಉದ್ಯಮಿ ರತನ್ ಟಾಟಾ ಅವರನ್ನು ಮಧ್ಯರಾತ್ರಿ 12.30-1ರ ಸುಮಾರಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಅವರ ರಕ್ತದೊತ್ತಡ ತೀವ್ರವಾಗಿ ಕುಸಿದಿದೆ ಮತ್ತು ಅವರನ್ನು ತಕ್ಷಣವೇ ಐಸಿಯುಗೆ ದಾಖಲಿಸಲಾಯಿತು, ಅಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ ಶಾರುಖ್ ಆಸ್ಪಿ ಗೋಲ್ವಾಲ್ಲಾ ನೇತೃತ್ವದ ತಂಡವು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.
ಇದನ್ನೂ ಓದಿ : ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಭೂಮಿ ಮಂಜೂರು!




