ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ಸಂಭವಿಸುತ್ತಿದ್ದು,ʻಮುಂದಿನ ಸಿಎಂ ಸತೀಶ್ ಜಾರಕಿಹೊಳಿʼ ಘೋಷಣೆ ಬೆನ್ನಲ್ಲೇ, PWD ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ನಿವಾಸ ʻಪವರ್ ಸೆಂಟರ್ʼ ಆಗಿ ಬದಲಾಗುತ್ತಿದೆ.
ಹೌದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಹಗರಣ (Muda Scam) ಸದ್ದು ಮಾಡುತ್ತಿದ್ದಂತೆ, ಇತ್ತ ಮುಂದಿನ ಸಿಎಂ ನಾನೇ ಎಂದು ಹಲವರು ಹೇಳಿಕೊಳ್ಳುತ್ತಿದ್ದು, ಇದೀಗ ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಎಂದು ಅವರ ಬೆಂಬಲಿಗರು ಘೋಷಣೆ ಹಾಕಿದ್ದಾರೆ. ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರ ಎದುರೇ ಈ ಘೋಷಣೆ ಮಾಡಲಾಗಿದ್ದು, ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇದಕ್ಕೆ ಪರ-ವಿರೋಧ ನಿಲುವು ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ಸಮಸ್ಯೆಗಳ ಮೂಟೆ ಹೊತ್ತ ಗ್ರಾಮಗಳಿಗೆ ‘ಗಾಂಧಿ ಗ್ರಾಮ’ ಗರಿ; ಇದು ಮಹಾತ್ಮಾ ಗಾಂಧಿಗೆ ಮಾಡುತ್ತಿರುವ ಅವಮಾನ: ಬಿ ವೈ ವಿಜಯೇಂದ್ರ
ಸಚಿವ ಜಾರಕಿಹೊಳಿ- ವಿಜಯೇಂದ್ರ ಭೇಟಿ; ಸಂಚಲನ
ಹೌದು, ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಧಿಡೀರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸತೀಶ್ ಅವರನ್ನು ದಿಲ್ಲಿಗೆ ಕಳಿಸಿದ್ದು ಸಿದ್ದರಾಮಯ್ಯನವರು ಎಂದು ವಿಜಯೇಂದ್ರ ಹೇಳಿಕೆ ನೀಡಿದ ಬೆನ್ನಲ್ಲೇ ಈ ಭೇಟಿಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಆದರೆ ಊಹಾಪೋಹ ತಳ್ಳಿ ಹಾಕಿರುವ ವಿಜಯೇಂದ್ರ, ಶಿಕಾರಿಪುರ ಬಳಿ ಆಗುವ ಟೋಲ್ ಶಿಫ್ಟ್ ಮಾಡಲು ಸಚಿವರಿಗೆ ಮನವಿ ಮಾಡಲು ಬಂದಿದ್ದೆ. ಬೇರೇನೂ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಭೂಮಿ ಮಂಜೂರು!
ಇನ್ನು, ಮಾಜಿ ಸಂಸದ ಡಿಕೆ ಸುರೇಶ್ ಸಹ ಇಂದು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನು, ಸತೀಶ್ ಜಾರಕಿಹೊಳಿ ಅವರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಎರಡೆರಡು ಬಾರಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಕಾಂಗ್ರೆಸ್ನಲ್ಲಿ ಕಿಂಗ್ ಮೇಕರ್ ಯಾರೂ ಇಲ್ಲ ಎಂದು ಜಾರಕಿಹೊಳಿ ಹೇಳಿದ್ದು, ಪರೋಕ್ಷವಾಗಿ ಡಿಕೆಶಿಯನ್ನು ಟೀಕಿಸಿದ್ದಾರೆ.
ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕುಟ್ರಳ್ಳಿ ಸುಂಕ ವಸೂಲಾತಿ ಕೇಂದ್ರದಿಂದ ನಮ್ಮ ರೈತರು ಹಾಗೂ ಸಾರ್ವಜನಿಕರಿಗೆ… pic.twitter.com/PoNSuzUQWq
— Vijayendra Yediyurappa (@BYVijayendra) October 7, 2024