Recruitment notification : ರಾಜ್ಯದ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಹೌದು, ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಲು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನು, 371ಜೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿ ಸೇರಿದಂತೆ 2023ರಲ್ಲಿ ಹೊರಡಿಸಿರುವ ಸುತ್ತೋಲೆ ಅನುಸರಿಸುವ ಕುರಿತು ಕ್ರಮಕ್ಕೆ ಸಿಎಂ ಆದೇಶಿಸಿದ್ದಾರೆ.
ಖಾಲಿ ಹುದ್ದೆಗಳ ನೇಮಕಾತಿಗೆ ಕಾಲಮಿತಿ:
ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಿ, ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.




