ಚೆನ್ನೈ: ಜೈಪುರ-ದೆಹಲಿ-ಚೆನ್ನೈ ಇಂಡಿಗೊ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಟೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯು ವ್ಯವಹಾರಕ್ಕೆ ಸಂಬಂಧಿಸಿದಂತೆ ಜೈಪುರಕ್ಕೆ ಪ್ರಯಾಣಿಸಿದ್ದರು. ತಮ್ಮ ಕೆಲಸ ಮುಗಿಸಿ ಚೆನ್ನೈಗೆ ವಾಪಸ್ಸಾಗುವ ವೇಳೆ ವಿಮಾನದ ಕಿಟಕಿ ಬಳಿಯ ಸೀಟಿನಲ್ಲಿ ಕುಳಿತಿದ್ದ ಮಹಿಳೆಯನ್ನ 45 ವರ್ಷದ ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿದ್ದಾರೆ.
ವ್ಯಕ್ತಿಯ ವರ್ತನೆಯ ಬಗ್ಗೆ ಸಂತ್ರಸ್ತ ಮಹಿಳೆಯು ಕ್ಯಾಬಿನ್ ಸಿಬ್ಬಂದಿಗೆ ದೂರು ನೀಡಿದ್ದು, ಮಾನವು ಚೆನ್ನೈನಲ್ಲಿ ಇಳಿಯುತ್ತಿದ್ದಂತೆ ಮಹಿಳೆಯ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.