ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಗಿರಿಯಲ್ಲಿ ನಡೆದಿದೆ.
ಕನಕಗಿರಿ ಪಟ್ಟಣದ ನಿವಾಸಿ ವಿನಯ್ (11) ಮೃತ ಬಾಲಕ. ಮನೆಯಿಂದ ಅನತಿ ದೂರದ ಕೆರೆ ಬಳಿ ಬಹಿರ್ದೆಸೆಗೆಂದು ಹೋಗಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ತುಂಡಾಗಿ ಬಿದ್ದಿದೆ. ಘಟನೆಯಲ್ಲಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಜೆಸ್ಕಾಂ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.