ಬೆಂಗಳೂರು: ಈವೆಂಟ್ ಮ್ಯಾನೇಜ್‌ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಟ್ಟೆಗಾರಪಾಳ್ಯದ ನಿವಾಸಿಗಳಾಗಿರುವ ಪ್ರಕಾಶ್ ಹಾಗೂ ಪಾರಿಜಾತಳನ್ನು ಸಿಸಿಬಿಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಇವರು ಬಡ ಹೆಣ್ಣುಮಕ್ಕಳಿಗೆ ಈವೆಂಟ್ ಮ್ಯಾನೇಜ್ಮೆಂಟ್ ನೌಕರಿ ಕೊಡಿಸುವುದಾಗಿ ನಂಬಿಸಿ ಕೆಲಸಕ್ಕೆ ಸೇರಿಸಿಕೊಳ್ಳುತ್ತಿದ್ದರು.
ಬಳಿಕ ಕೆಲಸದ ಸೋಗಿನಲ್ಲಿ ವಾರಕ್ಕೊಮ್ಮೆ ತಮಿಳುನಾಡು, ಪಾಂಡಿಚೇರಿ ರೆಸಾರ್ಟ್ಗಳಲ್ಲಿ ನಡೆಯುವ ಪಾರ್ಟಿಗಳಿಗೆ ಕರೆದೊಯ್ದು ಅಲ್ಲಿ ವೇಶ್ಯಾವಾಟಿಕೆಗೆ ಅವರನ್ನು ಬಳಸಿಕೊಳ್ಳುತ್ತಿದ್ದರು. ಹೊರ ರಾಜ್ಯಗಳ ಶ್ರೀಮಂತ ಉದ್ಯಮಿಗಳಿಂದ 25 ಸಾವಿರದಿಂದ 50 ಸಾವಿರದವರೆಗೂ ಹಣ ಪಡೆದು ಈ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.




