By-elections : ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ.
ಹೌದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಅದೇ ರೀತಿ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಪ್ರಯಾಣಿಕರಿಗೆ ಶೀಘ್ರ ಮುಕ್ತವಾಗಲಿದೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ರೋಡ್: ಪ್ರಯಾಣ ಸಮಯ ಉಳಿತಾಯ