ಭಾರೀ ಮಳೆ: ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ; ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ..!

Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದ್ದು,ಅದರಲ್ಲೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

Heavy rain alert

Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದ್ದು,ಅದರಲ್ಲೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೀಗಾಗಿ ಇಂದು (ಅಕ್ಟೋಬರ್ 16) ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆ ಘೋಷಿಸಿದ್ದು ಇನ್ನುಳಿದ ಜಿಲ್ಲೆಗಳಲ್ಲೂ ಮಳೆಯಾಗುತ್ತಿದ್ದು, ಅಲ್ಲಿಯೂ ರಜೆ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ..!

Vijayaprabha Mobile App free

ಇಂದು ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ..!

ಇನ್ನು ಬೆಂಗಳೂರಿನಲ್ಲಿ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಟ್ರಾಫಿಕ್​ಗೆ ಸವಾರರು ಹೆಣಗಾಡಿಬಿಟ್ಟಿದ್ದಾರೆ. ಇನ್ನು ಇಂದು ಕೂಡ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಆದರಿಂದ ಇಂದು ಬೆಂಗಳೂರಿನ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡುವಂತೆ ಐಟಿ ಕಂಪನಿಗಳಿಗೆ ಸೂಚಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.