Closing Hospitals: ನಾಳೆ ವೈದ್ಯಕೀಯ ಸಿಬ್ಬಂದಿಗಳ ಮುಷ್ಕರ

ಬೆಂಗಳೂರು: ನಾಳೆ ಬೆಳಿಗ್ಗೆ 6ರಿಂದ ಮರುದಿನ ಬೆಳಿಗ್ಗೆ 6ರವರೆಗೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ಘಟಕ ಕರ್ನಾಟಕ ಘಟಕ ತೀರ್ಮಾನಿಸಿದೆ. ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು…

Doctors strike tomorrow in Karnataka

ಬೆಂಗಳೂರು: ನಾಳೆ ಬೆಳಿಗ್ಗೆ 6ರಿಂದ ಮರುದಿನ ಬೆಳಿಗ್ಗೆ 6ರವರೆಗೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ಘಟಕ ಕರ್ನಾಟಕ ಘಟಕ ತೀರ್ಮಾನಿಸಿದೆ.

ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಲು ಐಎಂಎ ನಿರ್ಧರಿಸಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಬೇರೆ ಸೇವೆಗಳು ಇರುವುದಿಲ್ಲ ಎಂದು ಅದು ತಿಳಿಸಿದೆ.

ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಆಸ್ಪತ್ರೆಯಲ್ಲಿ ಅಗತ್ಯ ಭದ್ರತಾ ಸಿಬ್ಬಂದಿಯ ಕೊರತೆ ಇರುವುದು ಕಂಡುಬಂದಿದೆ. ಇದರಿಂದಾಗಿಯೇ ದುಷ್ಕರ್ಮಿಗಳು ಸುಲಭವಾಗಿ ತರಬೇತಿ ನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದು, ಕಾಲಮಿತಿಯೊಳಗೆ ತನಿಖೆ ನಡೆಸಿ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ವೈದ್ಯರ ಮೇಲೆ ಯಾವುದೇ ಹಿಂಸೆ ನಡೆಯದಂತೆ ನೀತಿ ರೂಪಿಸಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸಿದ್ದು, ಅದಕ್ಕೆ ಬೆಂಬಲವಾಗಿ ರಾಜ್ಯದಲ್ಲೂ ಮುಷ್ಕರ ನಡೆಸಲಾಗುತ್ತಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.