ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಪಟಾಕಿ ಸಂಭ್ರಮಕ್ಕೆ ರಾಜ್ಯ ಸರ್ಕಾರ ಲಗಾಮು ಹಾಕಿದೆ! ಪಟಾಕಿ ಸಿಡಿಸಲು ಕೇವಲ ಎರಡು ಗಂಟೆಗಳ ಸಮಯಾವಕಾಶ ನಿಗದಿ ಮಾಡಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಲು ಸುಪ್ರೀಂ ಕೋರ್ಟ್ ನಿರ್ದೇಶನವಿದೆ. ಹೀಗಾಗಿ ಅವುಗಳನ್ನ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಬಹುದು ಎಂದಿದ್ದಾರೆ.
ಪಟಾಕಿ ಸಿಡಿಸುವುದರಿಂದ ಕೆಲವೆಡೆ ಜೀವಹಾನಿಯಾಗಿದ್ದು, ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.