ಬೆಂಗಳೂರು : ಸಂಪುಟದ 3 ಸಚಿವರ ಖಾತೆಗಳನ್ನು ಅದಲು ಬದಲು ಮಾಡಲಾಗಿದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
ಶ್ರೀರಾಮುಲು ಬಳಿಯಿದ್ದ ಆರೋಗ್ಯ & ಹಿಂದುಳಿದ ವರ್ಗಗಳ ಖಾತೆಗಳನ್ನು ಸಿಎಂ ಯಡಿಯೂರಪ್ಪ ಅವರು ಹಿಂಪಡೆದಿದ್ದು, ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ನೀಡಿ ಆದೇಶಿಸಿದ್ದಾರೆ ಎನ್ನಲಾಗಿದ್ದು,ಇನ್ನು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಗೆ ಅವರಿಗೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ನೀಡಲಾಗಿದ್ದು, ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ
ಇನ್ನು, ಸಮಾಜ ಕಲ್ಯಾಣ ಖಾತೆಯನ್ನು ಸಚಿವ, ಅಪ್ ಮುಖ್ಯಮಂತ್ರಿ ಗೋವಿಂದ ಕಾರಜೋಳರಿಂದ ಹಿಂಪಡೆದು ಅವರಿಗೆ ಕೇವಲ ಲೋಕೋಪಯೋಗಿ ಇಲಾಖೆಯ ಹೊಣೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಅರೋಗ್ಯ ಸಚಿವ ಶ್ರೀರಾಮುಲು ಅವರು ತಮ್ಮ ಬಳಿಯಿದ್ದ ಅರೋಗ್ಯ ಖಾತಯನ್ನು ಹಿಂಪಡೆದು ಸಚಿವ ಸುಧಾಕರ್ ಗೆ ಅವರಿಗೆ ಹೆಚ್ಚುವರಿಯಾಗಿ ಆರೋಗ್ಯ ಖಾತೆ ನೀಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.




