Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಬೆಂಗಳೂರಿನಲ್ಲೂ ಮಳೆರಾಯ ಅಬ್ಬರಿಸಿದ್ದಾರೆ. ಈ ಮಳೆಗೆ ಸಿಟಿ ಜನರು ಪರದಾಡುವಂತಾಗಿದ್ದು, ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಕರಾವಳಿಯಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಇನ್ನೆರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: BBK 11: ಮತ್ತೆ ಬಿಗ್‌ಬಾಸ್‌ಗೆ ಲಾಯರ್ ಜಗದೀಶ್ ಎಂಟ್ರಿ ಅಸಾಧ್ಯ
Heavy rain : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭಾರೀ ಮಳೆ
ಇನ್ನು, ಬೆಂಗಳೂರಿನಲ್ಲಿ ಮಳೆರಾಯ ಇಂದು ಬೆಳ್ಳಂಬೆಳಗ್ಗೆ ಆರ್ಭಟಿಸಿದ್ದಾನೆ. ಬೆಳಗ್ಗೆ 4 ಗಂಟೆಯ ಸುಮಾರಿಗೆ ಭಾರೀ ಮಳೆ ಬಂದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹೀಗಾಗಿ ಬೆಳಗ್ಗೆಯೇ ಜನರಿಗೆ ಪರದಾಡಬೇಕಾದ ಸ್ಥಿತಿ ಬಂದಿದೆ.
ನಿನ್ನೆ ಸಂಜೆಯೂ ಎಡೆಬಿಡದೆ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ರಸ್ತೆಗಳೆಲ್ಲವೂ ಕೆರೆಯಂತಾಗಿದ್ದವು. ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಊರಿನಿಂದ ಬೆಂಗಳೂರಿಗೆ ವಾಪಸ್ ಬಂದವರಿಗೆ ಸಾಕು ಸಾಕಾಗಿಹೋಗಿತ್ತು.