Kiccha Sudeep mother Saroja passed away: ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ.
ಹೌದು, ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುದೀಪ್ ಅವರ ತಾಯಿ ಸರೋಜಾ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಕೊನೆಯುಸಿರೆಳೆದರು.
ಇನ್ನು, ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು. ಅಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಎಂದು ತಿಳಿದುಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.