ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು: ನೊಣವಿನಕೆರೆ ಸ್ವಾಮೀಜಿ ಮತ್ತೊಮ್ಮೆ ಆಶೀರ್ವಾದ

ಲಕ್ಷ್ಮೇಶ್ವರ (ಗದಗ): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಬೇಕು ಎಂದು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ಆಶೀರ್ವದಿಸಿದ್ದಾರೆ. ನಗರದ ಸಮೀಪವಿರುವ ಮುಕ್ತಿ ಮಂದಿರ ಕ್ಷೇತ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಂಭಾಪುರಿ ಪೀಠದ…

ಲಕ್ಷ್ಮೇಶ್ವರ (ಗದಗ): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಬೇಕು ಎಂದು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ಆಶೀರ್ವದಿಸಿದ್ದಾರೆ.

ನಗರದ ಸಮೀಪವಿರುವ ಮುಕ್ತಿ ಮಂದಿರ ಕ್ಷೇತ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಂಭಾಪುರಿ ಪೀಠದ ಲಿಂಗೈಕ್ಯ ವೀರಗಂಗಾಧರ ಜಗದ್ಗುರುಗಳ 42ನೇ ಪುಣ್ಯಾರಾಧನೆ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಮುಕ್ತಿ ಮಂದಿರ ಧರ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ತ್ರಿಕೋಟಿ (3 ಕೋಟಿ) ಲಿಂಗಗಳ ಸಂಸ್ಥಾಪನಾ ಕಾರ್ಯಕ್ಕೆ ಡಿಸಿಎಂ ಡಿ.ಕೆ.ಶಿವಕಮಾರ್ ಅವರು ಸಾಕಷ್ಟು ಅನುದಾನ ನೀಡಿದ್ದು, ಇನ್ನೂ ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅವರನ್ನು ಮುಖ್ಯಮಂತ್ರಿ ಮಾಡಿ. ಬಳಿಕ ಮುಕ್ತಿ ಮಂದಿರ ಧರ್ಮ ಕ್ಷೇತ್ರಕ್ಕೆ ಕರೆದುಕೊಂಡು ಬಂದು ಅವರಿಂದಲೇ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯದ ಉದ್ಘಾಟನೆ ಮಾಡಿಸೋಣ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಪ್ರಸ್ತುತ ಜಗದ್ಗುರು ಶ್ರೀಮದ್ ರಂಭಾಪುರಿ ವೀರಸಿಂಹಾಸನಧಿಶ್ವರ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೆಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ಹಲವಾರು ಸ್ವಾಮೀಜಿಗಳು, ರಾಜಕೀಯ ಗಣ್ಯರು ವೇದಿಕೆಯಲ್ಲಿ ಉಪ್ಥಿತರಿದ್ದರು.

Vijayaprabha Mobile App free

ಅಜ್ಜಯ್ಯನ ಪರಮ ಭಕ್ತ ಡಿಕೆಶಿ:

ವೀರಶೈವ ಲಿಂಗಾಯತರಿಗೆ ಪ್ರಮುಖ ಮೂಲ ಪೀಠಗಳಾದ ಪಂಚಪೀಠಗಳಲ್ಲಿ ಪ್ರಥಮ ಪೀಠವಾದ ರಂಭಾಪುರಿ ಪೀಠದ ಜಗದ್ಗುರುಗಳಾಗಿ ಮಾನವ ಧರ್ಮಕ್ಕೆ ಜಯವಾಗಲಿ ಎಂದು ಘೋಷವಾಕ್ಯ ನೀಡಿದ ಲಿಂಗೈಕ್ಯ ಶ್ರೀ ವೀರಗಂಗಾಧರ ಶಿವಾಚಾರ್ಯ ಭಗವತ್ಪಾದರನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯ ಎಂದು ಆರಾಧಿಸುತ್ತಿದ್ದಾರೆ. ಅಧಿಕಾರ ಸ್ವೀಕರಿಸುವಾಗ ಅವರ ಹೆಸರಿನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು, ತುಮಕೂರು ಜಿಲ್ಲೆಯ ನೊಣವಿನಕೆರೆಯಲ್ಲಿರುವ ಗಂಗಾಧರ ಜಗದ್ಗುರುಗಳ ಗದ್ದುಗೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಏನೇ ಕಷ್ಟಗಳು ಬಂದರು ಗದ್ದುಗೆಗೆ ಹೋಗಿ ನಮಸ್ಕರಿಸಿ ಪರಿಹಾರ ಕಂಡುಕೊಳ್ಳುತ್ತಾರೆ.

ಈ ಹಿಂದೆಯೂ ಭವಿಷ್ಯ:

ಈ ಹಿಂದೆಯೂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ನೊಣವಿನಕೆರೆ ಕಾಡಾಸಿದ್ಧೇಶ್ವರ ಮಠಾಧ್ಯಕ್ಷರಾಗಿರುವ ಡಾ.ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.