ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿ ಹಲವರನ್ನು ಈಗಾಗಲೇ ಬಂಧಿಸಿದ್ದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಈಗ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರು ಇಂದು ಬೆಂಗಳೂರಿನ ಎನ್ ಡಿಪಿಎಸ್ ಕೋರ್ಟ್ ನಲ್ಲಿ ಮೂರು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಹೌದು, ಸ್ಲಿಪ್ ಡಿಸ್ಕ್ ಸಮಸ್ಯೆ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು, ತಾಯಿ ಹಾಗೂ ತಮ್ಮನ ಐಪ್ಯಾಡ್ ಹಿಂದಿರುಗಿಸಲು ಮತ್ತು ವಕೀಲರೂ ಸೇರಿ ಇತರೆ ಸಂಬಂಧಿಕರ ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಕೋರ್ಟ್ ಸಿಸಿಬಿ ಎಸ್ಪಿಪಿ ಅವರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.
ಕೆಲ ದಿನಗಳ ಹಿಂದೆ ನಟಿ ರಾಗಿಣಿ ದ್ವಿವೇದಿ ಅವರು ತಮಗೆ ಬೇಲ್ ನೀಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಸಿಸಿಬಿ ಅಧಿಕಾರಿಗಳ ಮೇರೆಗೆ ಕೋರ್ಟ್ ರಾಗಿಣಿ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.