ಕಂಬಳ ಸ್ಪರ್ಧೆಗೆ ಅವಕಾಶ ನೀಡದಂತೆ ಹೈಕೋರ್ಟಿಗೆ ಪೇಟಾ ಅರ್ಜಿ: ಇಂದು ವಿಚಾರಣೆ

ಬೆಂಗಳೂರು: ಕಳೆದ ವರ್ಷ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ಕಂಬಳ ಏರ್ಪಡಿಸಿ ಯಶಸ್ವಿಗೊಳಿಸಿದ್ದ ಕರಾವಳಿಗರಿಗೆ ಈ ಬಾರಿ ಸ್ವಲ್ಪ ತಲೆ ನೋವು ಜಾಸ್ತಿಯಾಗಿದೆ. ಕಾರಣ ಕಂಬಳ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದು ಪೇಟಾ ಸಂಸ್ಥೆಯು…

ಬೆಂಗಳೂರು: ಕಳೆದ ವರ್ಷ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ಕಂಬಳ ಏರ್ಪಡಿಸಿ ಯಶಸ್ವಿಗೊಳಿಸಿದ್ದ ಕರಾವಳಿಗರಿಗೆ ಈ ಬಾರಿ ಸ್ವಲ್ಪ ತಲೆ ನೋವು ಜಾಸ್ತಿಯಾಗಿದೆ. ಕಾರಣ ಕಂಬಳ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದು ಪೇಟಾ ಸಂಸ್ಥೆಯು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

ಹೌದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ (ಕೋಣೆಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘವಾದ ‘ಪೆಟಾ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಲಿದೆ.

ಪೆಟಾ ಪರ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು ಸೋಮವಾರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮಂದೆ ಹಾಜರಾಗಿ, ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕೆಂದು ಕೋರಿದ್ದಾರೆ.
ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ ಇಷ್ಟು ವಿಳಂಬವೇಕೆ ಎಂದು ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿದ ಧ್ಯಾನ್‌ ಚಿನ್ನಪ್ಪ, ಜುಲೈನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರೂ ಇನ್ನೂ ವಿಚಾರಣೆಗೆ ನಿಗದಿಪಡಿಸಲಾಗಿಲ್ಲ. ಈಗ ಅ.25 ಮತ್ತು 26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ. ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದು ವಿವರಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠವು ಅ.22ಕ್ಕೆ (ಇಂದು) ವಿಚಾರಣೆ ನಿಗದಿಪಡಿಸಿದೆ.

Vijayaprabha Mobile App free

ವಾಣಿಜ್ಯ ಉದ್ದೇಶಕ್ಕಾಗಿ ಕಂಬಳ ಬಳಕೆ:

ಸಂಪ್ರದಾಯಿಕ ಮತ್ತು ಸಂಸ್ಕೃತಿ ಭಾಗವಾಗಿ ಕಂಬಳ ಕ್ರೀಡೆ ನಡೆಸಲಾಗುತ್ತದೆ ಎಂಬ ಉದ್ದೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗಗಳಲ್ಲಿ ಕಂಬಳ ಆಯೋಜಿಸಲು ಸುಪ್ರಿಂ ಕೋರ್ಟ್‌ ಅನುಮತಿಸಿದೆ. ಆದರೆ, ಇದೀಗ ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಹಾಗಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೊರತುಪಡಿಸಿ ಬೇರೆಲ್ಲೂ ಕಂಬಳ ಸ್ಪರ್ಧೆ ನಡೆಸಲು ಅನುಮತಿಸಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯ್ದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.