Vidyasiri Scholarship :ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿವೇತನ (Vidyasiri Scholarship) ನೀಡಲಾಗುತ್ತದೆ.
ಹೌದು, ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ‘ವಿದ್ಯಾಸಿರಿ’ ಯೋಜನೆ’ (Vidyasiri Yojana) ಜಾರಿ ಮಾಡಲಾಗಿದೆ.
ಇದನ್ನೂ ಓದಿ : PPF : ಪಿಪಿಎಫ್ ಖಾತೆ ತೆರೆಯುವುದು ಹೇಗೆ? ಹೆಚ್ಚು ರಿಟರ್ನ್ಸ್ ಪಡೆದುಕೊಳ್ಳಲು ಏನು ಮಾಡಬೇಕು?
Vidyasiri Scholarship Amount – ವೇತನದ ಮೊತ್ತ
ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500 ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,00 ಸಹಾಯಧನವನ್ನು ಆನ್‌ಲೈನ್ ಮೂಲಕ ಜಮಾ ಮಾಡಲಾಗುವುದು.
Vidyasiri Scholarship Qualifications – ಅರ್ಹತೆಗಳು
- ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು.
- ಮುಸ್ಲಿಂ, ಜೈನ್, ಸಿಖ್, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ ಸಮುದಾಯಕ್ಕೆ ಸೇರಿರಬೇಕು.
- ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತಿರ್ಣರಾಗಿರಬೇಕು.
- ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಮನೆಯಿಂದ ಕಾಲೇಜಿಗೆ ಕನಿಷ್ಠ ಐದು ಅಥವಾ ಅದಕ್ಕಿಂತ ಹೆಚ್ಚು ಕಿ.ಮೀ. ದೂರ ಇರಬೇಕು.
Vidyasiri Scholarship Required documents – ಬೇಕಾದ ದಾಖಲೆಗಳು
- ಪಾಸ್‌ಪೋರ್ಟ್ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಬ್ಯಾಂಕ್ ಅಕೌಂಟ್ ಪ್ರತಿ
- ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ
- ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
- ಮನೆಯಿಂದ ಕಾಲೇಜಿಗಿರುವ ದೂರದ ಪ್ರಮಾಣ ಪತ್ರ
- ರೇಷನ್ ಕಾರ್ಡ್/ವೋಟರ್ ಐಡಿ/ ಆಧಾರ್ ಕಾರ್ಡ್
ಇದನ್ನೂ ಓದಿ: PM Kisan ಯೋಜನೆಯ 19ನೇ ಕಂತಿನ ಕುರಿತು ಮಹತ್ವದ ಮಾಹಿತಿ; ₹2000 ಪಡೆಯಬೇಕಾದರೆ ಈ ಕೆಲಸ ಮಾಡಲೇಬೇಕು!
These students are not eligible ಈ ವಿದ್ಯಾರ್ಥಿಗಳು ಅರ್ಹರಲ್ಲ
- ವೈದ್ಯಕೀಯ ಅಭ್ಯಾಸ ಮಾಡುವಾಗ, ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳನ್ನು (Post Graduate Medical Course) ಅನುಸರಿಸುವ ವಿದ್ಯಾರ್ಥಿಗಳು ಅರ್ಹರಲ್ಲ
- ಒ೦ದಕ್ಕಿಂತ ಹೆಚ್ಚು ಬಾರಿ ಕೋರ್ಸ್‌ಗಳನ್ನು ಬದಲಾಯಿಸಿದ ವಿದ್ಯಾರ್ಥಿಗಳು.
- ಒಂದೇ ಕುಟುಂಬದ ಇಬ್ಬರಿಗಿಂತ ಹೆಚ್ಚು ವಿದ್ಯಾರ್ಥಿಗಳು ಅರ್ಹರಲ್ಲ. ಆದರೆ ಹೆಣ್ಣು ಮಕ್ಕಳಿಗೆ ಇದು ಅನ್ವಯಿಸುವುದಿಲ್ಲ.
Vidyasiri Scholarship Application submission – ಅರ್ಜಿ ಸಲ್ಲಿಕೆ
ವಿದ್ಯಾಸಿರಿಗಾಗಿ ಅರ್ಜಿ ಸಲ್ಲಿಸಲು https://bcwd.karnataka.gov.in/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಸೇವೆಗಳು ಮತ್ತು ಯೋಜನೆಗಳು ಕಾಲಮ್ ನಲ್ಲಿ ವಿದ್ಯಾಸಿರಿ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕಾಣುವ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.