Actor Darshan : ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಇಲ್ಲವಾದರೆ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂದು ದರ್ಶನ್ ಪರ ವಕೀಲರು ವಾದ ಮಾಡಿದ್ದಾರೆ.
ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಫಿಸಿಯೋಥೆರಪಿ ಹಾಗೂ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ಹೈಕೋರ್ಟ್‌ಗೆ ಸಲ್ಲಿಸಲಾಗಿರುವ ವೈದ್ಯಕೀಯ ವರದಿಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ: Diwali festival : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್!
ವಿಚಾರಣೆ ವೇಳೆ ಪೀಠವು ಮುಚ್ಚಿದ ಲಕೋಟೆಯಲ್ಲಿದ್ದ ವರದಿಯನ್ನು ಪರಿಶೀಲಿಸಿದೆ. ದರ್ಶನ್‌ಗೆ ಫಿಸಿಯೊಥೆರಪಿ ಹಾಗೂ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ವೈದ್ಯರು ತಿಳಿಸಿದ್ದಾರೆ ವರದಿಯಲ್ಲಿ ತಿಳಿಸಲಾಗಿದೆ.
Actor Darshan : ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ
ಇನ್ನು, ದರ್ಶನ್‌ಗೆ ಬೆನ್ನು ನೋವು ಇರುವ ವೈದ್ಯಕೀಯ ವರದಿಯನ್ನು ನೀಡಿ, ದರ್ಶನ್ ಪರ ವಕೀಲರು ಜಾಮೀನಿಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದು, ದರ್ಶನ್‌ಗೆ MRI ಸ್ಕ್ಯಾನ್ ಮಾಡಿಸಲಾಗಿದೆ. ನ್ಯೂರೋ ಸರ್ಜನ್ 3 ಅಂಶ ಹೇಳಿದ್ದಾರೆ. ನಂಬ್ನೆಸ್ ಇದೆ. ರಕ್ತಪರಿಚಲನೆ ಆಗುತ್ತಿಲ್ಲ. ಇದರಿಂದ ಕಿಡ್ನಿಗೆ ಸಮಸ್ಯೆ ಆಗಬಹುದು. ಡಿಸ್ಕ್ ಸಮಸ್ಯೆ ಇದೆ. ತಕ್ಷಣ ಸರ್ಜರಿಗೆ ಸೂಚಿಸಿದ್ದಾರೆ. ಇಲ್ಲವಾದರೆ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂದು ವಾದ ಮಾಡಲಾಗಿದೆ.