ಬಿಜೆಪಿಯ ಯತ್ನಾಳ್, ಸಿ.ಟಿ. ರವಿ, ಸೂಲಿಬೆಲೆ ವಿರುದ್ಧ ಚಾಮರಾಜನಗರದಲ್ಲೂ ದೂರು

ಚಾಮರಾಜನಗರ: ಇತ್ತೀಚೆಗೆ ಮೈಸೂರಲ್ಲಿ ದೂರು ದಾಖಲಾಗಿದ್ದ ಬಸನಗೌಡ ಯತ್ನಾಳ್, ಸಿ.ಟಿ.ರವಿ, ಸೂಲಿಬೆಲೆ ಅವರ ವಿರುದ್ಧ ಚಾಮರಾಜನಗರದಲ್ಲೂ ಮತ್ತೊಂದು ಪ್ರಕರಣ ದಾಖಲಾಗಿದೆ. ಹೌದು, ಒಂದು ಸಮುದಾಯದ ವಿರುದ್ಧ ನಿರಂತರವಾಗಿ ತೇಜೋವಧೆ ಮಾಡುವ ಮೂಲಕ ಮುಸ್ಲಿಂ ಮುಖಂಡರ…

ಚಾಮರಾಜನಗರ: ಇತ್ತೀಚೆಗೆ ಮೈಸೂರಲ್ಲಿ ದೂರು ದಾಖಲಾಗಿದ್ದ ಬಸನಗೌಡ ಯತ್ನಾಳ್, ಸಿ.ಟಿ.ರವಿ, ಸೂಲಿಬೆಲೆ ಅವರ ವಿರುದ್ಧ ಚಾಮರಾಜನಗರದಲ್ಲೂ ಮತ್ತೊಂದು ಪ್ರಕರಣ ದಾಖಲಾಗಿದೆ.

ಹೌದು, ಒಂದು ಸಮುದಾಯದ ವಿರುದ್ಧ ನಿರಂತರವಾಗಿ ತೇಜೋವಧೆ ಮಾಡುವ ಮೂಲಕ ಮುಸ್ಲಿಂ ಮುಖಂಡರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಮುಖಂಡ ಸಿ.ಟಿ.ರವಿ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಜಿಲ್ಲಾ ಅಲ್ಪ ಸಂಖ್ಯಾತರರ ಘಟಕದ ಅಧ್ಯಕ್ಷ ಅಫ್ಜಲ್ ಷರೀಪ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಎಸ್ಪಿ ಡಾ.ಬಿ.ಟಿ.ಕವಿತಾ ಅವರಿಗೆ ದೂರು ನೀಡಿದ್ದಾರೆ.

Vijayaprabha Mobile App free

ಈ ಮೂವರು ಉದ್ದೇಶ ಪೂರ್ವಕವಾಗಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡುವುದು. ಮುಸ್ಲಿಂ ಸಮುದಾಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ತಮ್ಮ ಭಾಷಣಗಳಲ್ಲಿ ಮುಸ್ಲಿಂ ಮುಖಂಡರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಕೋಮು ದ್ವೇಷಕ್ಕೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯಪುರದಲ್ಲಿ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ವಿಚಾರವಾಗಿ ಜನರಿಗೆ ತಪ್ಪು ಸಂದೇಶ ನೀಡುವ ಮೂಲಕ ರೈತರು ಹಾಗೂ ಇತರೇ ಜನಾಂಗದವರಲ್ಲಿ ಮುಸ್ಲಿಂ ಸಮುದಾಯದ ವಿರುದ್ದ ತಪ್ಪು ಭಾವನೆ ಮೂಡುವಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಜನರಿಂದ ಆಯ್ಕೆಯಾಗಿರುವ ಸರ್ಕಾರವಿದೆ. ರಾಜ್ಯ ಸರ್ಕಾರ ಅಧೀನದಲ್ಲಿ ವರ್ಕ್ಪ್ ಬೋರ್ಡ್ ಹಾಗೂ ಅಲ್ಪಸಂಖ್ಯಾತರ ಆಯೋಗ ಇದೆ. ಈಗಾಗಲೇ ಈ ವಿಚಾರವಾಗಿ ದೂರು ನೀಡಿದ್ದು. ತನಿಖೆ ನಡೆಯುತ್ತಿದೆ. ಇಷ್ಟಾಗಿ ಈ ಮೂವರು ಪ್ರಚೋದನಕಾರಿ ಹೇಳಿಕೆ ನೀಡಿ ಶಾಂತಿಗೆ ಭಂಗ ಉಂಟು ಮಾಡುತ್ತಿದ್ದಾರೆ. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲು ಮಾಡಿ, ಕೂಡಲೇ ಬಂಧಿಸಬೇಕು ಎಂದು ಎಸ್ಪಿಗೆ ನೀಡಿರುವ ಮನವಿಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.