Actor Darshan | ಇಂದು ದರ್ಶನ್​ ಜಾಮೀನು ಅರ್ಜಿ ಆದೇಶ; ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್..!

Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ (Darshan) ಅನಾರೋಗ್ಯದ ಕಾರಣ ನೀಡಿ ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.  ಹೌದು, ಅನಾರೋಗ್ಯದ ಕಾರಣ ನೀಡಿ ನಟ ದರ್ಶನ್ ಜಾಮೀನು…

Actor Darshan

Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ (Darshan) ಅನಾರೋಗ್ಯದ ಕಾರಣ ನೀಡಿ ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 

ಹೌದು, ಅನಾರೋಗ್ಯದ ಕಾರಣ ನೀಡಿ ನಟ ದರ್ಶನ್ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದು, ಹೈಕೋರ್ಟ್​ನಲ್ಲಿ ಎರಡು ದಿನಗಳ ಕಾಲ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿದ್ದು, ಅರ್ಜಿಯ ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿದೆ. ಆರೋಪಿ ಪರ ವಕೀಲ ನಾಗೇಶ್‌ ವಾದ ಮಂಡಿಸಿದರು. ಆದರೆ ಎಸ್​ಪಿಪಿ ಅವರು ದರ್ಶನ್​ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದು, ಇಬ್ಬರ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌ ನ್ಯಾಯಾಧೀಶರು ಆದೇಶವನ್ನು ಇಂದಿಗೆ ಕಾಯ್ದಿರಿಸಿದೆ.

ಇದನ್ನೂ ಓದಿ: Actor Darshan : ನಟ ದರ್ಶನ್ ಗೆ ಪಾರ್ಶ್ವವಾಯು ಆಗುವ ಸಾಧ್ಯತೆ..? ವೈದ್ಯಕೀಯ ವರದಿಯಲ್ಲಿ ಬಹಿರಂಗ..!

Vijayaprabha Mobile App free

Actor Darshan : ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್..!

ಇನ್ನು, ವಿಚಾರಣಾಧೀನ ಖೈದಿಗೆ ಚಿಕಿತ್ಸೆ ಪಡೆಯುವ ಅವಕಾಶ ಇದ್ದು, ದರ್ಶನ್ ಗೆ ಜಾಮೀನು ಇಂದು ಸಿಗಬಹುದು ಎಂಬ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಈ ವಾರ ಬಳ್ಳಾರಿ ಜೈಲಿಗೆ ಭೇಟಿ ನೀಡಿಲ್ಲ.

120 ದಿನಗಳಿಗೂ ಅಧಿಕ ಕಾಲ ಜೈಲಿನಲ್ಲಿರುವ ದರ್ಶನ್​ಗೆ ಇಂದು ಜಾಮೀನು ಸಿಗುವ ನಿರೀಕ್ಷೆಯಿದ್ದು, ಭರ್ಜರಿ ಸ್ವಾಗತ ಕೋರಲು ಫ್ಯಾನ್ಸ್​ ಸಿದ್ಧರಾಗಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.