Heavy rain : ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಮಳೆರಾಯ, ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಚಳಿಯ ಜೊತೆಗೆ ಮಳೆಯೂ ಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡಿನಲ್ಲಿ ಅಕ್ಟೋಬರ್ 31 (ನಾಳೆ) ರಿಂದ ನವೆಂಬರ್ 2 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇದೇ ರೀತಿ, ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು 2 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ. ಇನ್ನು, ಈ ವರ್ಷ ಚಳಿಯ ಪ್ರಮಾಣ ದಾಖಲೆ ಬರೆಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.