ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 31 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕಿಂಗ್ಸ್ ಇಲೆವೆನ್ ತಂಡ 8 ವಿಕೆಟ್ ಗಳ ಭರ್ಜರಿ ಜಯಭೇರಿ ಬಾರಿಸಿದೆ.
172 ರನ್ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 20 ಓವರ್ ಗಳಲ್ಲಿ 2 ವಿಕೆಟ್ ಗಳನ್ನು ಕಳೆದುಕೊಂಡು 177 ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಪಂಜಾಬ್ ಪರ ನಾಯಕ ಕೆ ಎಲ್ ರಾಹುಲ್ -61, ಮಾಯಾಂಕ್ ಅಗರ್ವಾಲ್-45, ಕ್ರಿಸ್ ಗೇಲ್-53 ರನ್ ಗಳಿಸಿರು. ಆರ್ ಸಿಬಿ ಪರ, ಯಜುವೇಂದ್ರ ಚಾಹಲ್ ಒಂದು ವಿಕೆಟ್ ಪಡೆದರು.
ಇದಕ್ಕೂ ಮುಂಚೆ ಟಾಸ್ ಗೆದ್ದು, ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ -18, ಅರೋನ್ ಫಿಂಚ್-20, ನಾಯಕ ವಿರಾಟ್ ಕೊಹ್ಲಿ-48, ಶಿವಂ ದುಬೆ-23 ಹಾಗು ಕ್ರಿಸ್ ಮಾರಿಸ್-25 ರನ್ ಗಳ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿತು. ಪಂಜಾಬ್ ಪರ, ಮಹಮದ್ ಶಮಿ, ಮುರುಗನ್ ಅಶ್ವಿನ್ ತಲಾ 2 ವಿಕೆಟ್, ಅರ್ಶದೀಪ್ ಸಿಂಗ್, ಕ್ರಿಸ್ ಜೋರ್ಡನ್ ತಲಾ 1 ವಿಕೆಟ್ ಪಡೆದರು.
ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಅಮೋಘ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಪ್ರಮುಖ ಕಾರಣರಾದ ಕೆ ಎಲ್ ರಾಹುಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.
ಇದನ್ನು ಓದಿ: 21 ವರ್ಷದ ಬಳಿಕ ಪುನೀತ್ ಜೊತೆ ನಟಿಸುತ್ತಿರುವೆ…!